TSK

TSK · ಅರಣ್ಯಕಾಂಡ 6:25

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.

ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.

ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; ಪ್ರೀತಿಯಿಂದ ನನ್ನನ್ನು ರಕ್ಷಿಸು.

ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.

ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.

“ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.