ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
TSK
TSK · ಅರಣ್ಯಕಾಂಡ 7:1
مراجع Treasury of Scripture Knowledge في ಕನ್ನಡ IRV.
ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.
ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.
¶ ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
¶ ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು.
“ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.
‹ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?›