¶ ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.
TSK
TSK · ಅರಣ್ಯಕಾಂಡ 8:12
مراجع Treasury of Scripture Knowledge في ಕನ್ನಡ IRV.
ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
¶ “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
¶ ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.
¶ ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
¶ ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು.
ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
¶ “ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.
ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.
ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು.
ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.