TSK

TSK · ಅರಣ್ಯಕಾಂಡ 9:7

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.

ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.

ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.