TSK

TSK · ಫಿಲೆಮೋನನಿಗೆ 1:14

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.

ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?

ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.

ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.

¶ ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.