‹ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.›
TSK
TSK · ಫಿಲೆಮೋನನಿಗೆ 1:6
مراجع Treasury of Scripture Knowledge في ಕನ್ನಡ IRV.
ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.
¶ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.
¶ ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?
ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
¶ ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.
ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.