ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
TSK
TSK · ಫಿಲಿಪ್ಪಿಯವರಿಗೆ 1:20
مراجع Treasury of Scripture Knowledge في ಕನ್ನಡ IRV.
ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ.
ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.
ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.
“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.
ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ ‹“ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.
ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.
ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ.
ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.
ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
¶ ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
¶ ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.