TSK

TSK · ಫಿಲಿಪ್ಪಿಯವರಿಗೆ 1:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.

¶ ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.

¶ ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.

ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?

¶ ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.