TSK

TSK · ಫಿಲಿಪ್ಪಿಯವರಿಗೆ 1:4

مراجع Treasury of Scripture Knowledge في ಕನ್ನಡ IRV.

العودة إلى المقطع

‹ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.›

ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.

ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.

ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.

ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.

ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.

¶ ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು.