ಯೇಸುವು, ‹“ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ”› ಎಂದನು.
TSK
TSK · ಫಿಲಿಪ್ಪಿಯವರಿಗೆ 1:6
مراجع Treasury of Scripture Knowledge في ಕನ್ನಡ IRV.
ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.
ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.
ನೀವು ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.
ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,
ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,
ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.
ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.
ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.
ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ.
¶ ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.