ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.
TSK
TSK · ಫಿಲಿಪ್ಪಿಯವರಿಗೆ 1:9
مراجع Treasury of Scripture Knowledge في ಕನ್ನಡ IRV.
ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.
ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
¶ ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
¶ ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.
¶ ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.
¶ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.