TSK

TSK · ಫಿಲಿಪ್ಪಿಯವರಿಗೆ 2:16

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.

ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.

¶ ‹“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.›

ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.

“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.

ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.

ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.

ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.

ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.

¶ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.