TSK

TSK · ಫಿಲಿಪ್ಪಿಯವರಿಗೆ 2:30

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.

ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.

ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?

ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.

¶ ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.

ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು.