ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
TSK
TSK · ಫಿಲಿಪ್ಪಿಯವರಿಗೆ 2:8
مراجع Treasury of Scripture Knowledge في ಕನ್ನಡ IRV.
ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.
ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
ತಿರುಗಿ ಎರಡನೇ ಸಾರಿ ಹೋಗಿ, ‹“ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ”› ಎಂದು ದೇವರನ್ನು ಪ್ರಾರ್ಥಿಸಿದನು.
ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.
‹ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ”› ಎಂದನು.
‹ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ”› ಎಂದನು.
ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.