¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
TSK
TSK · ಫಿಲಿಪ್ಪಿಯವರಿಗೆ 3:14
مراجع Treasury of Scripture Knowledge في ಕನ್ನಡ IRV.
¶ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.
ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
¶ ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.
¶ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
¶ ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.