TSK

TSK · ಫಿಲಿಪ್ಪಿಯವರಿಗೆ 3:21

مراجع Treasury of Scripture Knowledge في ಕನ್ನಡ IRV.

العودة إلى المقطع

ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.

ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.

ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, ‹“ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;›

‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.›

ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.

¶ ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.

ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.

¶ “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.

¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.