TSK

TSK · ಫಿಲಿಪ್ಪಿಯವರಿಗೆ 3:7

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.

ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.

ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.

¶ ‹“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.›

ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.

‹ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.›

‹ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.›

ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.

¶ ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.

ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.