TSK

TSK · ಫಿಲಿಪ್ಪಿಯವರಿಗೆ 4:14

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.

ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.

¶ ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.

ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.

¶ ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.