TSK

TSK · ಫಿಲಿಪ್ಪಿಯವರಿಗೆ 4:19

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,

ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು.

ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.

ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.

ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.

ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?

ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.

ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.

ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.

ಯೇಸು ಆಕೆಗೆ, ‹“ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು”› ಎಂದನು.

¶ ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.

¶ ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.

ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.

ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.

ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.

ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.

ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,

ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

¶ ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,