TSK

TSK · ಫಿಲಿಪ್ಪಿಯವರಿಗೆ 4:8

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.

ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.

“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.

ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.

ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.

ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.

ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.

ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.

ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.

¶ ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.

ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.

¶ “ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ

¶ ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.

ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.

¶ ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.

ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ. ಈ ಸಹೋದರನು ಸುವಾರ್ತಾ ಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿ ಪಡೆದುಕೊಂಡವನಾಗಿದ್ದಾನೆ.

ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.

¶ ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.

ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,

ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.

ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.

ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.

ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.

ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,

ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;

ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.

¶ ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.

ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.

ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.

¶ ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.

ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.

¶ ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.