TSK

TSK · ಙ್ಞಾನೋಕ್ತಿಗಳು 10:18

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.

ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.

ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.

ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,

ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.

ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.

ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.

ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.