TSK

TSK · ಙ್ಞಾನೋಕ್ತಿಗಳು 11:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.

ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!

ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?

ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.

‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›

ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.