ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
TSK
TSK · ಙ್ಞಾನೋಕ್ತಿಗಳು 12:15
مراجع Treasury of Scripture Knowledge في ಕನ್ನಡ IRV.
ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.
ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.
ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.
ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
ಎನ್ನಲು ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ” ಎಂದು ಉತ್ತರಕೊಟ್ಟನು.
ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.