TSK

TSK · ಙ್ಞಾನೋಕ್ತಿಗಳು 13:1

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.

ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.

ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.

ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.

ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.