¶ ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು.
TSK
TSK · ಙ್ಞಾನೋಕ್ತಿಗಳು 13:10
مراجع Treasury of Scripture Knowledge في ಕನ್ನಡ IRV.
ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.
ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.
ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.
‹ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?›
¶ ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.
ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?