¶ ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು.
TSK
TSK · ಙ್ಞಾನೋಕ್ತಿಗಳು 13:12
مراجع Treasury of Scripture Knowledge في ಕನ್ನಡ IRV.
ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.
ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.
ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.
ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
‹ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.›