ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.
TSK
TSK · ಙ್ಞಾನೋಕ್ತಿಗಳು 14:8
مراجع Treasury of Scripture Knowledge في ಕನ್ನಡ IRV.
ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.
ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.
ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.
ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.
‹ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.›
ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
¶ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.