TSK

TSK · ಙ್ಞಾನೋಕ್ತಿಗಳು 15:1

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.

ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.

ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.

ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,

ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು.

ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.

ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.

ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.