TSK

TSK · ಙ್ಞಾನೋಕ್ತಿಗಳು 15:11

مراجع Treasury of Scripture Knowledge في ಕನ್ನಡ IRV.

العودة إلى المقطع

ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.

ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.

ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.

ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.

ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.

‹ಸದಾ ಜೀವಿಸುವವನೂ ಆಗಿದ್ದೇನೆ.›‹ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.›‹ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.›