TSK

TSK · ಙ್ಞಾನೋಕ್ತಿಗಳು 15:14

مراجع Treasury of Scripture Knowledge في ಕನ್ನಡ IRV.

العودة إلى المقطع

“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.

ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ, ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.

ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.

ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.

ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.

ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.