TSK

TSK · ಙ್ಞಾನೋಕ್ತಿಗಳು 15:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.

ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಅಂದರು.

¶ ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.

ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.

ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.

ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು.