ಯೋಬನು 20:19
TSK
ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.
TSK
مراجع Treasury of Scripture Knowledge في ಕನ್ನಡ IRV.
ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.
ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.
ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೊಕ್ಕಸಗಳನ್ನು ತುಂಬಿಸುವೆನು.
ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.
ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.