TSK

TSK · ಙ್ಞಾನೋಕ್ತಿಗಳು 16:14

مراجع Treasury of Scripture Knowledge في ಕನ್ನಡ IRV.

العودة إلى المقطع

ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,

ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು.

ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.

ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು.

ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;

¶ ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.