TSK

TSK · ಙ್ಞಾನೋಕ್ತಿಗಳು 16:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.

ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.

ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.

ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.

‹ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.›

ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.

ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.

¶ ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,