ಅರಣ್ಯಕಾಂಡ 26:55
TSK
ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
TSK
مراجع Treasury of Scripture Knowledge في ಕನ್ನಡ IRV.
ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.
ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.
ಸೌಲನು ಪುನಃ, “ನಮ್ಮಿಬ್ಬರೊಳಗೆ ಚೀಟು ಹಾಕಿರಿ” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು.
ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.
ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.