¶ ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
TSK
TSK · ಙ್ಞಾನೋಕ್ತಿಗಳು 18:10
مراجع Treasury of Scripture Knowledge في ಕನ್ನಡ IRV.
¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.
ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.
ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.
ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.
ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ
ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.
ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.
“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”