TSK

TSK · ಙ್ಞಾನೋಕ್ತಿಗಳು 19:1

مراجع Treasury of Scripture Knowledge في ಕನ್ನಡ IRV.

العودة إلى المقطع

ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.

ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.

ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.

ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.

ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.

ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.

‹ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.›

¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?