TSK

TSK · ಙ್ಞಾನೋಕ್ತಿಗಳು 19:2

مراجع Treasury of Scripture Knowledge في ಕನ್ನಡ IRV.

العودة إلى المقطع

ಒಂದು ವೇಳೆ ನಾನು ಕಪಟತನದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿದರೆ,

ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.

ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.

ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.

¶ ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.

ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.

‹ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.›

ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.