ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.
TSK
TSK · ಙ್ಞಾನೋಕ್ತಿಗಳು 20:22
مراجع Treasury of Scripture Knowledge في ಕನ್ನಡ IRV.
ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.
ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.
“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.
ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.
¶ ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.