“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.
TSK
TSK · ಙ್ಞಾನೋಕ್ತಿಗಳು 20:25
مراجع Treasury of Scripture Knowledge في ಕನ್ನಡ IRV.
¶ “‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.
ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.
ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.
ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.
ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.
“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.