ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು.
TSK
TSK · ಙ್ಞಾನೋಕ್ತಿಗಳು 21:4
مراجع Treasury of Scripture Knowledge في ಕನ್ನಡ IRV.
ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.
ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.
ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
¶ ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,
‹ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.
¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”