TSK

TSK · ಙ್ಞಾನೋಕ್ತಿಗಳು 22:16

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.

ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.

ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.

‹ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.›

‹‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.›

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.