ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.
TSK
TSK · ಙ್ಞಾನೋಕ್ತಿಗಳು 22:7
مراجع Treasury of Scripture Knowledge في ಕನ್ನಡ IRV.
ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.
¶ ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.
“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.
‹ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.›
¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.