¶ “ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.
TSK
TSK · ಙ್ಞಾನೋಕ್ತಿಗಳು 23:10
مراجع Treasury of Scripture Knowledge في ಕನ್ನಡ IRV.
ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ.
ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.
ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.
ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.
ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.