TSK

TSK · ಙ್ಞಾನೋಕ್ತಿಗಳು 23:9

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.

ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.

¶ ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ.

¶ ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.

ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!

ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.

ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.

ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ

ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.