ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.
TSK
TSK · ಙ್ಞಾನೋಕ್ತಿಗಳು 24:2
مراجع Treasury of Scripture Knowledge في ಕನ್ನಡ IRV.
ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.
ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.
ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.
ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.
ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.
¶ ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು.