¶ “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
TSK
TSK · ಙ್ಞಾನೋಕ್ತಿಗಳು 24:23
مراجع Treasury of Scripture Knowledge في ಕನ್ನಡ IRV.
¶ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.
ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.
ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.
‹ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ”› ಎಂದನು.
ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?
¶ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.