ಯೋಬನು 5:27
TSK
ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.”
TSK
مراجع Treasury of Scripture Knowledge في ಕನ್ನಡ IRV.
ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.”
ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.
ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.
ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
¶ ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.