¶ “ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”
TSK
TSK · ಙ್ಞಾನೋಕ್ತಿಗಳು 25:2
مراجع Treasury of Scripture Knowledge في ಕನ್ನಡ IRV.
ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.
¶ ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.
¶ ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.
ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.
ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?
ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.
‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ.
ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.