TSK

TSK · ಙ್ಞಾನೋಕ್ತಿಗಳು 27:21

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಹಾಡುತ್ತಾ, ಕೊಂಡಾಡುತ್ತಾ, “ಸೌಲನು ಸಾವಿರ ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದರು.

ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಸುಪ್ರಸಿದ್ಧವಾಯಿತು.

ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.

ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.

ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.

¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.